ಶುಕ್ರವಾರ -ದ.ಕ 97,ಉಡುಪಿ 16 ಹಾಗೂ ರಾಜ್ಯದಲ್ಲಿ 1694 ಕೊರೊನ ಪಾಸಿಟಿವ್ ಪತ್ತೆ…
ಮಂಗಳೂರು: ಇಂದು(ಶುಕ್ರವಾರ) ದ.ಕ ಜಿಲ್ಲೆಯಲ್ಲಿ 97 ,ಉಡುಪಿ ಜಿಲ್ಲೆಯಲ್ಲಿ 16 ಹಾಗೂ ರಾಜ್ಯದಲ್ಲಿ 1694 ಕೊರೊನ ಪಾಸಿಟಿವ್ ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು ಲಭಿಸಿದ 425 ಪರೀಕ್ಷಾ ವರದಿಗಳ ಪೈಕಿ 97 ವರದಿಗಳಲ್ಲಿ ಪಾಸಿಟಿವ್ ಕಂಡುಬಂದಿದೆ. ಉಳಿದಂತೆ 328 ವರದಿ ನೆಗೆಟಿವ್ ಆಗಿದೆ. ಒಟ್ಟು 1010 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳ್ಳಾಲ ವ್ಯಾಪ್ತಿಯ ಸಿಸಿಬಿ ಪೊಲೀಸ್, ಉಳ್ಳಾಲ ನಗರಸಭೆ ಸದಸ್ಯ, ನಗರಸಭೆ ಮಾಜಿ ಅಧ್ಯಕ್ಷ ,ಬಿಜೆಪಿ ಮುಖಂಡ ಹಾಗೂ ಉಳ್ಳಾಲ ನಗರಸಭೆ ಕಾವಲುಗಾರ ಸೇರಿದಂತೆ ಒಟ್ಟು 38 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಉಳ್ಳಾಲದಲ್ಲಿ ನಡೆದ ರ್‍ಯಾಂಡಮ್ ಪರೀಕ್ಷೆಗೆ ಒಳಪಟ್ಟ 28 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜೂ.23 ರಿಂದ 10 ದಿನಗಳವರೆಗೆ ಉಳ್ಳಾಲದಲ್ಲಿ 109 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು 273 ಮಂದಿಯ ವರದಿ ನೆಗೆಟಿವ್ ಬಂದಿದೆ. 1417 ಮಂದಿಯ ವರದಿ ಬರಲು ಬಾಕಿ ಇದೆ.
ಇಂದು 14 ಮಂದಿ ಬಿಡುಗಡೆಯಾಗುವ ಮೂಲಕ 1104 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಂತಾಗಿದೆ. 151 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ರಾಜ್ಯದಲ್ಲಿ ಇಂದು 1694 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ದಾಖಲುಗೊಂಡಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 994, ಬಳ್ಳಾರಿ 97, ದಕ್ಷಿಣ ಕನ್ನಡದಲ್ಲಿ 97, ಕಲಬುರಗಿಯಲ್ಲಿ 72 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 42 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19710ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಶುಕ್ರವಾರ 471 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 10608 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 201 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.