ಗುರುಪುರ ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು – ಪರಿಹಾರ ವಿತರಣೆ…
ಮಂಗಳೂರು: ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳುಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗಿದೆ.
ಸೋಮವಾರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿತರಿಸಿದರು. ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಉಪಸ್ಥಿತರಿದ್ದರು.
ಗುರುಪುರ ಬಂಗ್ಲೆಗುಡ್ಡೆಯ ಬಳಿ ಗುಡ್ಡ ಕುಸಿದು ಸುಮಾರು ನಾಲ್ಕು ಮನೆಗಳಿಗೆ ಹಾನಿಯಾಗಿತ್ತು. ಘಟನೆಯಲ್ಲಿ 16 ವರ್ಷದ ಸಫ್ವಾನ್ ಮತ್ತು 10 ವರ್ಷದ ಸಹಲಾ ಮೃತಪಟ್ಟಿದ್ದರು. ಸುಮಾರು ಐದು ಗಂಟೆಗಳ ಕಾರ್ಯಾಚರಣೆಯ ನಂತರ ಎನ್ ಡಿ ಆರ್ ಎಫ್ ಪಡೆ ಮಣ್ಣಿನಡಿಯಿಂದ ಇಬ್ಬರು ಮಕ್ಕಳ ಮೃತದೇಹವನ್ನು ಹೊರತೆಗೆದಿದ್ದರು.