ಬುಧವಾರ – ದ.ಕ 183 ,ಉಡುಪಿ 31 ಕೊರೊನ ಸೋಂಕು ಪತ್ತೆ…
ಮಂಗಳೂರು: ಇಂದು(ಬುಧವಾರ) ದ.ಕ ಜಿಲ್ಲೆಯಲ್ಲಿ 183 ,ಉಡುಪಿ ಜಿಲ್ಲೆಯಲ್ಲಿ 31 ಕೊರೊನ ಸೋಂಕು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 183 ಮಂದಿಯಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿರುವ ಮೂಲಕ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.ಜಿಲ್ಲೆಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಜೊತೆಗೆ SARI ಮತ್ತು ILI ಪ್ರಕರಣಗಳಿಂದಲೂ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಳವಾಗಿದ್ದು ಇದರೊಂದಿಗೆ ವಿದೇಶದಿಂದ ಬಂದಿರುವ ಕೆಲವು ಪ್ರಯಾಣಿಕರಲ್ಲೂ ಸೋಂಕು ದೃಢ ಪಟ್ಟಿವೆ.ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1542 ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು 31 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1421 ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಮಹಾರಾಷ್ಟ್ರದಿಂದ ಬಂದ 7 ಮಂದಿ, ಅಬುದಾಬಿಯಿಂದ ಬಂದ ಒರ್ವರು, ಮಸ್ಕತ್ ನಿಂದ ಬಂದ 2 ಮಂದಿ ಹಾಗೂ ಹೊರ ಜಿಲ್ಲೆಯಿಂದ ಬಂದ 9 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಅಲ್ಲದೆ ಪ್ರಾಥಮಿಕ ಸಂಪರ್ಕದಿಂದ ಉಡುಪಿಯ 12 ಜನಕ್ಕೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.
ಕಾಸರಗೋಡು ಜಿಲ್ಲೆಯಲ್ಲಿ ಇಂದು ಒಂದು ವರ್ಷದ ಮಗು ಸೇರಿದಂತೆ ನಾಲ್ವರಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ.