ಎಂಜಿನಿಯರಿಂಗ್, ಪದವಿ, ಡಿಪ್ಲೊಮಾ – ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ…

ಬೆಂಗಳೂರು: 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ರಾಜ್ಯ ಸರಕಾರ ಪ್ರಕಟಿಸಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.ಈ ನಿರ್ಧಾರ 2019-20ನೇ ಅಂದರೆ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಕಾಲೇಜು ಮತ್ತು ವಿಶ್ವವಿದ್ಯಾಲಯದ ಮಟ್ಟದಲ್ಲಿ ಸೆಪ್ಟೆಂಬರ್‌ ಮೊದಲ ತಿಂಗಳಿನಿಂದ ಆನ್‌ಲೈನ್‌ ತರಗತಿಗಳು ನಡೆಯಲಿವೆ . ರೆಗ್ಯುಲರ್ ತರಗತಿ ಅಕ್ಟೋಬರ್‌ 01 ರಿಂದ ಆರಂಭವಾಗಲಿದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ, ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button