ಮನಪಾ ಆಯುಕ್ತರಿಗೆ ಕೊರೋನಾ ದೃಢ…

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಕೊರೋನಾ ಸೋಂಕು ತಗುಲಿರುವುದು ಇಂದು(ರವಿವಾರ) ದೃಢಪಟ್ಟಿದೆ.
ಎರಡು ದಿನಗಳ ಹಿಂದೆ ಅವರಲ್ಲಿ ಜ್ವರ ಲಕ್ಷಣ ಕಂಡುಬಂದಿತ್ತು. ಅವರ ಗಂಟಲು ದ್ರವ ಮಾದರಿಯನ್ನು ವೈದ್ಯ ಸಿಬ್ಬಂದಿ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಬಂದ ವರದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.