ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್ – ಸಚಿವ ಕೋಟಾ ಶ್ರೀನಿವಾಸ ಪೂಜಾರಿ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸೋಮವಾರ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರ ಸಹಿತ ಹಲವು ಅಧಿಕಾರಿಗಳು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕೊರೊನಾ ನಿಯಂತ್ರಣಕ್ಕಾಗಿ ಒಂದಷ್ಟು ದಿನಗಳ ಕಾಲ ಮತ್ತೆ ಲಾಕ್ ಡೌನ್ ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಜು.16 ರಿಂದ ಒಂದು ವಾರಗಳ ಕಾಲ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಲಾಗುವುದು. ಇನ್ನು ಎರಡು ದಿನಗಳ ಕಾಲಾವಾಕಾಶ ಇರುವುದರಿಂದ ಎಲ್ಲರೂ ವಾರಗಳಿಗೆ ಅಗತ್ಯವಿರುವ ದಿನಸಿ ಸಾಮಾಗ್ರಿ ಹಾಗೂ ಮೂಲಭೂತ ಅವಶ್ಯಕತೆಗಳನ್ನು ಖರೀದಿ ಮಾಡಿಟ್ಟುಕೊಳ್ಳಬೇಕು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.