ಕೊರೋನಾ – ಸುಳ್ಯದ ಮಹಿಳೆ ಬಲಿ…
ಪುತ್ತೂರು: ಸುಳ್ಯ ಮೂಲದ ಸುಮಾರು 62 ವರ್ಷದ ಮಹಿಳೆಯೊಬ್ಬರು ಕೊರೋನಾ ಸೋಂಕಿನಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುಳ್ಯ ಬೆಳ್ಳಾರೆ ನೆಟ್ಟಾರು ನಿವಾಸಿ ಮಹಿಳೆಯನ್ನು ಜು.14ರ ಮಧ್ಯಾಹ್ನ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಹಿಳೆ ಬಿಪಿ, ಶುಗರ್, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ಅವರ ಕೋವಿಡ್ ಪರೀಕ್ಷೆ ವೇಳೆ ಸೋಂಕು ಇರುವುದು ದೃಢಪಟ್ಟಿದೆ. ತೀರಾ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.