ಮಂಗಳೂರು ಉತ್ತರ ಕ್ಷೇತ್ರದಲ್ಲಿ ಪ್ರತಿ ಮನೆಯಲ್ಲೂ ಆರೋಗ್ಯ ತಪಾಸಣೆ – ಮೊಹಿಯುದ್ದೀನ್ ಬಾವಾ…

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮನೆ ಮನೆಗೆ ಕಾರ್ಯಕರ್ತರನ್ನು ಕಳುಹಿಸಿ ಆರೋಗ್ಯ ತಪಾಸಣೆ ಮಾಡುವ ಕಾರ್ಯಕ್ರಮವನ್ನು ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಜು.21 ರಂದು ಉದ್ಘಾಟಿಸಿದರು.
ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಪ್ರತೀ ಮನೆ ಮನೆಗೆ ಕಾಂಗ್ರೆಸ್ ವಾರಿಯರ್ಸ್ ಎಂಬ ಹೆಸರಿನಲ್ಲಿ ಕಾರ್ಯಕರ್ತರನ್ನು ಕಳುಹಿಸಿ ಜನರ ದೇಹದ ಉಷ್ಣತೆಯನ್ನು ಪರೀಕ್ಷಿಸಲಿದ್ದಾರೆ. ಕಾರ್ಯಕರ್ತರಿಗೂ ಗ್ಲೌಸ್ ,ಫೇಸ್ ಶೀಲ್ಡ್, ಸ್ಯಾನಿಟೈಸರ್, ಮಾಸ್ಕ್ ಮತ್ತಿತರ ಸುರಕ್ಷಾ ಕಿಟ್ ಗಳನ್ನೂ ನೀಡಲಾಗಿದೆ. ಒಂದು ವೇಳೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಲ್ಲಿ ಅವರಿಗೆ ಸೂಕ್ತ ತಪಾಸಣೆಗೆ ಒಳಪಡಿಸಲಾಗುವುದು .ಅಗತ್ಯ ಬಿದ್ದರೆ ಆಂಬುಲೆನ್ಸ್ ಸೇವೆ ,ಆಸ್ಪತ್ರೆಯ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಬಾವಾ ಹೇಳಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಮನಪಾ ಸದಸ್ಯ ಅನಿಲ್ ಕುಮಾರ್, ಬಶೀರ್ ಬೈಕಂಪಾಡಿ, ರಾಜೇಶ್ ಕುಳಾಯಿ, ಮತ್ತಿತರು ಪದಾಧಿಕಾರಿಗಳು ಭಾಗವಹಿಸಿದ್ದರು.

FB IMG 1595413644419 300x141

IMG 20200722 160713 300x168

Related Articles

Leave a Reply

Your email address will not be published. Required fields are marked *