ಬುಧವಾರ – ದ.ಕ 162 ,ಉಡುಪಿ 281 ಹಾಗೂ ರಾಜ್ಯದಲ್ಲಿ 4764 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಬುಧವಾರ) ದ.ಕ ಜಿಲ್ಲೆಯಲ್ಲಿ 162 ,ಉಡುಪಿ ಜಿಲ್ಲೆಯಲ್ಲಿ 281 ಹಾಗೂ ರಾಜ್ಯದಲ್ಲಿ 4764 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು ಹೊಸದಾಗಿ 162 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3991 ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಬುಧವಾರ 281 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2686ಕ್ಕೆ ಏರಿಕೆಯಾಗಿದೆ. ಇದುವರೆಗೂ 1765 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 910 ಸಕ್ರಿಯ ಪ್ರಕರಣಗಳು ಇವೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,050 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4,764 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 75,833ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 15 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 55 ಮಂದಿ ಸಾವನ್ನಪ್ಪಿದ್ದಾರೆ.

IMG 20200722 WA0030 218x300

Related Articles

Leave a Reply

Your email address will not be published. Required fields are marked *