ಬಕ್ರೀದ್ ಹಬ್ಬ – ಸರಕಾರದ ಮಾರ್ಗಸೂಚಿ ಬಿಡುಗಡೆ…
ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಜುಲೈ 31 ರಂದು ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ. ಉಳಿದೆಡೆ ಆ. 1 ರಂದು ಆಚರಿಸಲಾಗುತ್ತದೆ. ಹಬ್ಬದ ಆಚರಣೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಹೀಗಿವೆ.
ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ ಹಾಕಬೇಕು.
60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡುವುದು.
ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು.
ಮಸೀದಿಗಳನ್ನು ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡುವುದು.
ಕೈಗಳನ್ನು ಸೋಪು / ಸ್ಯಾನಿಟೈಜರ್ನಿಂದ ಶುಚಿಗೊಳಿಸುವುದು.
ಮಸೀದಿಗಳಲ್ಲಿರುವ ಧಾರ್ಮಿಕ ಗ್ರಂಥಗಳನ್ನು ಮುಟ್ಟುವಂತಿಲ್ಲ.
ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು(ಜಾಯನಮಾಜ್) ಕಡ್ಡಾಯವಾಗಿ ತರುವುದು.
ಹಸ್ತಲಾಘವ ಮತ್ತು ಆಲಿಂಗನ ಮಾಡದಿರಲು ಸೂಚಿಸುವುದು.
ಅಪರಿಚಿತರು ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಬಂದಲ್ಲಿ ಅವರ ಬಗ್ಗೆ ವಿಶೇಷ ಗಮನ ಹರಿಸುವುದು.
ಈದ್ಗಾಹ್ಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧ.
ಮಸೀದಿಗಳಲ್ಲಿ ಗರಿಷ್ಟ 50 ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಬಹುದು.
5 ಹೊತ್ತಿನ ನಮಾಜ್ ನಿರ್ಬಂಧ.
ಮಸೀದಿ ಹೊರತುಪಡಿಸಿ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ಜಾಗಗಳಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ.