ಶನಿವಾರ – ದ.ಕ 218 ,ಉಡುಪಿ 182 ಹಾಗೂ ರಾಜ್ಯದಲ್ಲಿ 5072 ಕೊರೊನ ಪಾಸಿಟಿವ್ ಪತ್ತೆ…
ಮಂಗಳೂರು: ಇಂದು(ಶನಿವಾರ) ದ.ಕ ಜಿಲ್ಲೆಯಲ್ಲಿ 218 ,ಉಡುಪಿ ಜಿಲ್ಲೆಯಲ್ಲಿ 182 ಹಾಗೂ ರಾಜ್ಯದಲ್ಲಿ 5072 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 218 ಕೋವಿಡ್–19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4612 ಕ್ಕೆ ಏರಿದೆ. ಇಂದು 239 ಮಂದಿ ಗುಣಮುಖರಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇಂದು ಒಟ್ಟು 493 ವರದಿಗಳು ನೆಗೆಟಿವ್ ಆಗಿದ್ದು, 182 ವರದಿಗಳು ಪಾಸಿಟಿವ್ ಆಗಿದೆ. 46 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 87 ಮಂದಿಗೆ ILI , 15 SARI ಪ್ರಕರಣಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3218 ಕ್ಕೆ ಏರಿಕೆಯಾಗಿದೆ.ಜಿಲ್ಲೆಯಲ್ಲಿ ಶಿವಮೊಗ್ಗ ಮೂಲದ ವ್ಯಕ್ತಿ ಶುಕ್ರವಾರ ರಾತ್ರಿ ಕೊರೊನಾದಿಂದ ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿಗೆ 13 ಮಂದಿ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 5072 ಪ್ರಕರಣಗಳು ವರದಿಯಾಗಿದ್ದು, 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 90942 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 2403 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 33750 ಕ್ಕೆ ಏರಿದೆ.