ಶ್ರೀನಿವಾಸ್ ವಿಶ್ವವಿದ್ಯಾಲಯ – ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ ಓರಿಯಂಟೇಷನ್ ಕಾರ್ಯಕ್ರಮ…

ಮಂಗಳೂರು: ಜೂನ್ 2020ನೇ ಶೈಕ್ಷಣಿಕ ಸಾಲಿನಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ನೋಂದಾವಣಿಗೊಂಡ ಪಿ.ಹೆಚ್.ಡಿ. ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮವು ಜು. 22 ರಂದು ಆನ್ ಲೈನ್ ನಲ್ಲಿ ಆಯೋಜಿಸಲಾಗಿತ್ತು.
ಮುಕ್ಕ ಶ್ರೀನಿವಾಸ್ ನಗರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ರಿಸರ್ಚ್ ಅಂಡ್ ಇನ್ನೋವೇಶನ್ ಕೌನ್ಸಿಲ್ ನ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಎಸ್. ಐತಾಳ್ ಅವರು ವಿಶ್ವವಿದ್ಯಾಲಯದ ಪಿ.ಹೆಚ್.ಡಿ. ನೀತಿ ನಿಯಮಗಳು, ಕಾರ್ಯಕಲಾಪಗಳು ಹಾಗೂ ಪಿ.ಹೆಚ್.ಡಿ. ಪದವಿಯ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.
ರಿಸರ್ಚ್ ಅಂಡ್ ಇನ್ನೋವೇಶನ್ ಕೌನ್ಸಿಲ್ ನ ನಿರ್ದೇಶಕ ಡಾ. ಪ್ರವೀಣ್ ಬಿ. ಎಂ. ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಸಂಶೋಧನಾ ಕಾರ್ಯಕ್ರಮಗಳು ಹಾಗೂ ಅವುಗಳ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಲ್ಲಾ ಕಾಲೇಜುಗಳ ಡೀನ್ ಗಳು, ಸಂಶೋಧನಾ ಪ್ರೊಫೆಸರ್ ಗಳು ಹಾಗೂ ನೂತನ ಪಿ.ಹೆಚ್.ಡಿ. ವಿದ್ಯಾರ್ಥಿಗಳು ಹಾಜರಿದ್ದರು. ಡಾ. ಕೃಷ್ಣಪ್ರಸಾದ್ ಕೆ. ಕಾರ್ಯಕ್ರಮವನ್ನು ನಿರ್ವಹಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button