ಸೋಮವಾರ – ದ.ಕ 119 ,ಉಡುಪಿ 225 ಹಾಗೂ ರಾಜ್ಯದಲ್ಲಿ 5324 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಸೋಮವಾರ) ದ.ಕ ಜಿಲ್ಲೆಯಲ್ಲಿ 119 ,ಉಡುಪಿ ಜಿಲ್ಲೆಯಲ್ಲಿ 225 ಹಾಗೂ ರಾಜ್ಯದಲ್ಲಿ 5324 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 119 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಇದರಲ್ಲಿ 46 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 34 ILI ಪ್ರಕರಣಗಳು ಹಾಗೂ 6 SARI ಪ್ರಕರಣಗಳಾಗಿವೆ. ಜಿಲ್ಲೆಯಲ್ಲಿ ಇಂದು ಕೊರೊನ ಕ್ಕೆ 8 ಮಂದಿ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇಂದು 225 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 3613 ಕ್ಕೆ ಏರಿಕೆಯಾಗಿದೆ.ಒಟ್ಟು 2184 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಇಂದು ರಾಜ್ಯದಲ್ಲಿ ಒಟ್ಟು 5324 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,01,465ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 1470 ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.ರಾಜ್ಯದಲ್ಲಿ ಮಹಾಮಾರಿಗೆ ಇಂದು 75 ಮಂದಿ ಬಲಿಯಾಗಿದ್ಧಾರೆ.