ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ವರ್ಗಾವಣೆ…

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ.ಬಿ.ರೂಪೇಶ್ ಅವರು ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ.
ಸಿಂಧೂ ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೇಶಕಿಯನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ ಓ ಆಗಿದ್ದ ಡಾ. ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.