ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ,ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮ…
ಸುಳ್ಯ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ ಜು.30 ರಂದು ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು.
ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್ .ಭವಾನಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪುತ್ತೂರು ಡಾ.ಶಿವರಾಮ ಕಾರಂತ ಬಾಲವನದ ಆಡಳಿತಾಧಿಕಾರಿ ಡಾ.ಸುಂದರ ಕೇನಾಜೆ ಅವರು ಕರಾವಳಿಯ ಪತ್ರಿಕೆಗಳ ಇತಿಹಾಸ, ಎದುರಿಸುತ್ತಿರುವ ಸವಾಲುಗಳು, ಜವಾಬ್ದಾರಿಯುತ ಪತ್ರಿಕಾ ಧರ್ಮದ ಬಗ್ಗೆ ಉಪನ್ಯಾಸ ನೀಡಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಪೋಲೀಸ್ ಉಪನಿರೀಕ್ಷಕ ಹರೀಶ್ ಕುಮಾರ್ ಎಂ.ಆರ್. ಅತಿಥಿಗಳಾಗಿದ್ದರು. ಜಿಲ್ಲಾ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ, ಸಂಘದ ಗೌರವಾಧ್ಯಕ್ಷ ತೇಜೇಶ್ವರ್ ಕುಂದಲ್ಪಾಡಿ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪತ್ರಿಕಾ ಕ್ಷೇತ್ರದಲ್ಲಿನ ಸೇವೆಗಾಗಿ ಶಂಕರ್ ಪೆರಾಜೆಯವರನ್ನು ಸನ್ಮಾನಿಸಲಾಯಿತು.
ಕು.ಮೇಘಕೃಷ್ಣ ಪ್ರಾರ್ಥಿಸಿದರು. ಸಂಘದ ಜಿಲ್ಲಾ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿದರು. ಸಂಘದ ಮಾಜಿ ಅಧ್ಯಕ್ಷ ದುರ್ಗಾಕುಮಾರ್ ನಾಯರ್ ಕೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.