ರಸ್ತೆ ಅಫಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಸಾವು…

ಬಂಟ್ವಾಳ: ಶುಕ್ರವಾರ ಸಂಜೆ ಮೆಲ್ಕಾರಿನ ಮಂಚಿ ಮಸೀದಿಯ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತ ಯುವಕನನ್ನು ಬೋಳಂತರು ನಿವಾಸಿ ಉನಾಯಿಸ್ (17) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಬೈಕ್ ನಲ್ಲಿ ಮಂಚಿಯಲ್ಲಿ ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಲಾರಿಯೊಂದನ್ನು ಓವರ್ ಟೇಕ್ ಮಾಡುವ ವೇಳೆ ಎದುರಿನಿಂದ ಬಂದ ಆಟೊಕ್ಕೆ ಉನಾಯಿಸ್ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.. ಆದರೆ ಇಂದು ಮುಂಜಾನೆ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

WhatsAppImage2020 08 01at12.30.58PM 300x225

Related Articles

Leave a Reply

Your email address will not be published. Required fields are marked *