ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯಗುರು ಎಂ ಎಸ್ ಶಿವರಾಮ ಶಾಸ್ತ್ರಿಯವರಿಗೆ ಬೀಳ್ಕೊಡುಗೆ…
ಸುಳ್ಯ: ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿನ ಮುಖ್ಯಗುರುಗಳಾದ ಎಂ ಎಸ್ ಶಿವರಾಮ ಶಾಸ್ತ್ರಿಯವರ ಬೀಳ್ಕೊಡುಗೆ ಕಾರ್ಯಕ್ರಮವು ಜು.31 ರಂದು ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ನೆಟ್ಟಾರು ವೆಂಕಟ್ರಮಣ ಭಟ್ ವಹಿಸಿದ್ದರು. ಮಾಜಿ ವಿಧಾನಪರಿಷತ್ ಸದಸ್ಯರಾದ ಅಣ್ಣಾ ವಿನಯಚಂದ್ರ ಕಿಲಂಗೋಡಿ ಅಭಿನಂದನಾ ಕಾರ್ಯಕ್ರಮ ನೆರವೇರಿಸಿದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರಶೇಖರ ಪೇರಾಲು,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ,ಸುಳ್ಯ ತಾಲೂಕು ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು,ಸಂಸ್ಥೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರ ಬಾಲಕೃಷ್ಣ ಪುತ್ಯ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅಚ್ಯುತ ಮೇಲ್ಕಜೆ ಹಾಗೂ ನಿಯೋಜಿತ ಮುಖ್ಯಗುರುಗಳಾದ ಯಶೋಧರ ನಾರಾಲು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆಡಳಿತ ಸಮಿತಿಯ ಕೋಶಾಧಿಕಾರಿ ಕಿರಣ್ ನೆಟ್ಟಾರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ಶಿಕ್ಷಕಿ ಸಹನಾ ನಿರೂಪಿಸಿ, ಶಿಕ್ಷಕರ ಲೋಕೇಶ್ ಬೆಳ್ಳಿಗೆ ವಂದಿಸಿದರು.
ಎಂ ಎಸ್ ಶಿವರಾಮ ಶಾಸ್ತ್ರಿಯವರು 1985ರಿಂದ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಂಸ್ಕೃತ ಅಧ್ಯಾಪಕರಾಗಿ ಸೇವೆಯನ್ನು ಆರಂಭಿಸಿದರು. ಸುಮಾರು 13 ವರ್ಷಗಳ ಕಾಲ ಮುಖ್ಯೋಪಾಧ್ಯಾಯರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಅವರು ಸುಮಾರು 35 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇವರು ಪತ್ನಿ ಶ್ರೀಮತಿ ವಸಂತಿ ಕೆ , ಮಗ ಸುಹಾಸ್ ಎಸ್ ಹಾಗೂ ಮಗಳು ಸೂಕ್ತಿ ಎಸ್ ಇವರೊಂದಿಗೆ ಜೀವನ ನಡೆಸುತ್ತಿದ್ದಾರೆ.