ಸುಳ್ಯ – ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಶ್ರೀಕೃಷ್ಣ ಎಂ.ಆರ್, ಕಾರ್ಯದರ್ಶಿಯಾಗಿ ಸುನಿಲ್ ಕೇರ್ಪಳ ಆಯ್ಕೆ …

ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಶ್ರೀಕೃಷ್ಣ ಎಂ.ಆರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಕೇರ್ಪಳ ಆಯ್ಕೆಯಾಗಿದ್ದಾರೆ.
ಕಡಬ ತಾಲೂಕು ಬಲ್ಯ ಗ್ರಾಮದ ಹೊಸಮಠದಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ಶ್ರೀಕೃಷ್ಣ ಎಂ.ಆರ್ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಸುಳ್ಯ ನಗರದ ಸುನಿಲ್ ಕೇರ್ಪಳ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ ಎಂದು ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ ಹಾಗೂ ಸುಬೋಧ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.