ಬೋಳಂತೂರು – ಮಹಿಳೆ ಮೇಲೆ ಹಲ್ಲೆ, ಮಾನಭಂಗಕ್ಕೆ ಯತ್ನ, ಜೀವ ಬೆದರಿಕೆ….

ಬಂಟ್ವಾಳ : ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ಗ್ರಾಮದಲ್ಲಿ ವಿವಾಹಿತ ಮಹಿಳೆಯ ಮನೆಗೆ ಬಂದ ಯುವಕನೊಬ್ಬ ಆಕೆಯ ಮಾನಭಂಗಕ್ಕೆ ಯತ್ನಿಸಿದ್ದಾಗಿ ವಿಟ್ಲ ಪೊಲೀಸರಿಗೆ ದೂರು ನೀಡಲಾಗಿದೆ.
ಮದಕ ನಿವಾಸಿ ಸಾಧಿಕ್ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಆರೋಪಿ ರಾತ್ರಿ ಸಮಯದಲ್ಲಿ ಮಹಿಳೆಯ ಮನೆಗೆ ಬಂದು ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂಡು ತಿಳಿದುಬಂದಿದೆ. ಆರೋಪಿ ಸಾಧಿಕ್ ಮಹಿಳೆಯ ಮೊಬೈಲ್ ಗೆ ಮೆಸೇಜ್ ಹಾಗೂ ಕರೆ ಮಾಡಿ ತೊಂದರೆ ನೀಡುತ್ತಿದ್ದ ಎನ್ನಲಾಗಿದೆ.
ಮಕ್ಕಳು ಮನೆಯಲ್ಲಿ ಮಲಗಿದ್ದ ಸಮಯ ರಾತ್ರಿ 11.30ರ ವೇಳೆಗೆ ಆರೋಪಿ ಮಹಿಳೆಯ ಮನೆಗೆ ತೆರಳಿ ಬಾಗಿಲು ತಟ್ಟಿದ್ದಾನೆ. ಆ ಸಂದರ್ಭದಲ್ಲಿ ಮಹಿಳೆ ಬಾಗಿಲನ್ನು ತೆರೆದು ಆರೋಪಿಯನ್ನು ಕಂಡು ಬಾಗಿಲು ಮುಚ್ಚಲು ಪ್ರಯತ್ನಿಸಿದಾಗ ಆರೋಪಿಯು ಬಾಗಿಲನ್ನು ದೂಡಿ ಒಳಬಂದು ಕೈಯಿಂದ ಮಹಿಳೆಯನ್ನು ದೂಡಿಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯು ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾನೆ ಎಂದು ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vit 620x462 1 E1596387734896 300x163

Related Articles

Leave a Reply

Your email address will not be published. Required fields are marked *