ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್…

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಟ್ವಿಟರ್ ಮೂಲಕ ವಿಷಯ ಈ ವಿಚಾರ ಹಂಚಿಕೊಂಡಿದ್ದಾರೆ.
ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗ ಲಕ್ಷಣಗಳಿಲ್ಲದಿದ್ದರೂ, ಮುನ್ನೆಚ್ಚರಿಕಾ ದೃಷಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಬಿ.ಎಸ್. ಯಡಿಯೂರಪ್ಪ ಟ್ವಿಟರ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.