ಯಡಿಯೂರಪ್ಪ ಅವರ ಪುತ್ರಿಯೊಬ್ಬರಲ್ಲೂ ಕೊರೋನಾ ದೃಢ….

ಬೆಂಗಳೂರು: ಆದಿತ್ಯವಾರ ರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಕೊರೋನಾ ದೃಢಪಟ್ಟ ಬೆನ್ನಲ್ಲೇ ಅವರ ಪುತ್ರಿಯೊಬ್ಬರಲ್ಲೂ ಕೊರೋನಾ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.
ಇದೀಗ ಅವರ ಪುತ್ರಿಯಲ್ಲೂ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇವರನ್ನೂ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಯಡಿಯೂರಪ್ಪ ಆರೋಗ್ಯ ಕುರಿತಂತೆ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಯಡಿಯೂರಪ್ಪ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿದ್ದ ಯಡಿಯೂರಪ್ಪ ಅವರು ಪ್ರತಿನಿತ್ಯ ಅನೇಕ ಸಚಿವರು, ಅಧಿಕಾರಿಗಳು, ವೈದ್ಯರು, ಖಾಸಗಿ ಆಶ್ಪತ್ರೆಗಳು ಸೇರಿದಂತೆ ಇತರೆ ಪ್ರಮುಖರೊಂದಿಗೆ ಸಭೆಗಳಲ್ಲಿ ಭಾಗವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿ ವಾರವೂ ಅವರಿಗೆ ಕೊರೋನಾ ಪರೀಕ್ಷೆ ಮಾಡಲಾಗುತ್ತಿತ್ತು. ಈ ಬಾರಿ ಅವರಿಗೆ ಪಾಸಿಟಿವ್ ವರದಿ ಬಂದಿದೆ.