ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್…

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ದೃಢವಾಗಿದ್ದು, ಅವರು ಸೋಮವಾರ ರಾತ್ರಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ವಿಚಾರವನ್ನು ಟ್ವಿಟರ್ ಮೂಲಕ ತಿಳಿಸಿರುವ ಅವರು, ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾವುದೇ ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

Siddaramaiah EPS 300x150

Related Articles

Leave a Reply

Your email address will not be published. Required fields are marked *