ಮಂಗಳವಾರ – ದ.ಕ 225 ,ಉಡುಪಿ 170 ಹಾಗೂ ರಾಜ್ಯದಲ್ಲಿ 6259 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಮಂಗಳವಾರ ) ದ.ಕ ಜಿಲ್ಲೆಯಲ್ಲಿ 225 ,ಉಡುಪಿ ಜಿಲ್ಲೆಯಲ್ಲಿ 170 ಹಾಗೂ ರಾಜ್ಯದಲ್ಲಿ 6259 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 225 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.3138 ಸಕ್ರಿಯ ಪ್ರಕರಣಗಳಿವೆ.73 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 13 ಮಂದಿ ಕೊರೊನದಿಂದಾಗಿ ಮೃತಪಟ್ಟಿದ್ದಾರೆ.ಮಂಗಳೂರು ತಾಲೂಕಿನಲ್ಲಿ 147 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಂಟ್ವಾಳದಲ್ಲಿ 19, ಬೆಳ್ತಂಗಡಿಯಲ್ಲಿ 29, ಪುತ್ತೂರು 16, ಸುಳ್ಯ ತಾಲೂಕಿನಲ್ಲಿ 4 ಸೋಂಕು ಪತ್ತೆಯಾಗಿದೆ. ಹೊರ ಜಿಲ್ಲೆಯ 9 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು 170 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದೆ.ಇಂದು ಲಭಿಸಿದ ವರದಿಗಳಲ್ಲಿ 1352 ವರದಿಗಳು ನೆಗೆಟಿವ್ ಆಗಿದೆ.
ಇಂದು ರಾಜ್ಯದಲ್ಲಿ ಹೊಸದಾಗಿ 6,259 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,45,830ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 110 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 2,704ಕ್ಕೆ ಏರಿಕೆಯಾಗಿದೆ.