ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ…

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಬುಧವಾರ) 12.44ಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರು ಮೊದಲು 40 ಕಿಲೋ ತೂಕದ ಬೆಳ್ಳಿ ಇಟ್ಟಿಗೆ ಪ್ರತಿಷ್ಠಾಪಿಸಿದ್ದರು. ವಿಶ್ವ ಹಿಂದೂ ಪರಿಷತ್ ನ ಮುಖಂಡ ದಿ.ಅಶೋಕ್ ಸಿಂಘಾಲ್ ಅವರ ಸೋದರಳಿಯ ಸಲಿಲ್ ಸಿಂಘಾಲ್ ಯಜಮಾನನಾಗಿ ಭೂಮಿ ಪೂಜೆ ಮುನ್ನಡೆಸಿದ್ದರು.
ಪ್ರಧಾನಿ ಮೋದಿ ಅವರು 12.44:08ರಿಂದ 12.44:40ರ 32 ಸೆಕೆಂಡುಗಳ ಅವಧಿಯ ಶುಭ ಮುಹೂರ್ತದಲ್ಲಿ ಭೂಮಿ ಪೂಜೆ, ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಆರೆಸ್ಸೆಸ್ ಸರಸಂಘಚಾಲಕ ಮೋಹನ್ ಜೀ, ನ್ಯಾಸ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲದಾಸ್ ಜತೆಗಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button