ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತ- ಓರ್ವರ ಮೃತದೇಹ ಪತ್ತೆ…
ಮಡಿಕೇರಿ: ಗುರುವಾರ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ತಲಕಾವೇರಿ ಅರ್ಚಕ ನಾರಾಯಣ ಆಚಾರ್ಯ ಮತ್ತು ಅವರ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದರು.ಈ ಸ್ಥಳದಲ್ಲಿ ಎನ್‌ಡಿಆರ್‌ಎಫ್ ಕಾರ್ಯಾಚರಣೆ ಆರಂಭಿಸಿದ್ದು ಇಂದು ಮಧ್ಯಾಹ್ನದ ವೇಳೆಗೆ ಒಂದು ಮೃತದೇಹ ಪತ್ತೆಯಾಗಿದೆ.
ಈ ಪ್ರದೇಶದಲ್ಲಿ ಪ್ರಧಾನ ಅರ್ಚಕರು ಹಾಗೂ ಅವರ ಕುಟುಂಭಸ್ಥರು ವಾಸಗಿದ್ದರು. ಇದೀಗ ಮೃತ ದೇಹವನ್ನು ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಅವರ ಅಣ್ಣ ಆನಂದ ತೀರ್ಥ ಸ್ವಾಮಿ (86) ಅವರದ್ದು ಎಂದು ಗುರುತಿಸಲಾಗಿದೆ. ಇನ್ನೂ ಕಣ್ಮರೆಯಾದ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಇಂದು ಬೆಳಿಗ್ಗೆ ಸ್ವಲ್ಪ ಮಳೆ ಕಡಿಮೆಯಾದ ಕಾರಣ ಕಾರ್ಯಾಚರಣೆ ನಡೆಸಲಾಯಿತು. ಆದರೆ ಮತ್ತೆ ಮಳೆ ಆರಂಭವಾಗಿ ಅಡ್ಡಿಯಾಯಿತು. ನಾಪತ್ತೆಯಾಗಿದ್ದ ಕೆಲವು ಜಾನುವಾರುಗಳ ಕಳೆಬರ ಇಂದು ಪತ್ತೆಯಾಗಿದೆ.
ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿದೆ. ಸ್ಥಳಕ್ಕೆ ಎನ್ ಡಿಆರ್ ಎಫ್ ತಂಡ ಆಗಮಿಸಿದ್ದರೂ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಸಂಜೆ ಮೂರು ಗಂಟೆಯ ನಂತರ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ.