ಬಿ.ಎ. ಸಮೂಹ ಸಂಸ್ಥೆಗಳ ಸಂಸ್ಥಾಪಕ ಬಿ.ಅಹ್ಮದ್ ಹಾಜಿ ನಿಧನ…

ಬಂಟ್ವಾಳ: ಶೈಕ್ಷಣಿಕ ಸಾಧಕ, ಉದ್ಯಮಿ, ಸಮಾಜಿಕಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅವರು ಆ. 16ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಹ್ಮದ್ ಹಾಜಿ ಅವರು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.‌
ಇಂದು ಸಂಜೆ ತುಂಬೆ ಕಾಲೇಜಿನ ವಠಾರದಲ್ಲಿ ಜನಾಝ ನಮಾಝ್ ಗೆ ವ್ಯವಸ್ಥೆ ಮಾಡಲಾಗಿದೆ‌. ಬಳಿಕ ತುಂಬೆ ಜುಮಾ ಮಸೀದಿಯ ಆಧೀನದ ಖಬರ್ ಸ್ಥಾನದಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Mb 160820 Haji 300x231

Related Articles

Leave a Reply

Your email address will not be published. Required fields are marked *