ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಇಲ್ಲಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಗೌರವಪೂರ್ವಕವಾಗಿ ಆಚರಿಸಲಾಯಿತು. ಅರ್ಕೀವ ಏಷ್ಯಾ ಪೆಸಿಫಿಕ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾದ ಅಶಿತ್.ಬಿ.ಹೆಗ್ಡೆ ರಾಷ್ಟ್ರಧ್ವಜ ಆರೋಹಣಗೈದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯಾನಂತರದ ಭಾರತದಲ್ಲಾದ ತಾಂತ್ರಿಕತೆಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು.ಭಂಡಾರಿ ಫೌಂಡೇಶನ್ ನ ಚೆಯರ್ ಮೆನ್ ಡಾ.ಮಂಜುನಾಥ್ ಭಂಡಾರಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ. ಶ್ರೀನಿವಾಸ ರಾವ್ ಕುಂಟೆ, ಉಪಪ್ರಾಂಶುಪಾಲ ಪ್ರೊ.ಎಸ್.ಎಸ್.ಬಾಲಕೃಷ್ಣ, ಎಲ್ಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಂತರ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Sponsors

Related Articles

Leave a Reply

Your email address will not be published. Required fields are marked *

Back to top button