ಈಜು ಸ್ಪರ್ಧೆಯಲ್ಲಿ ಸುಹಾಸ್ಗೆ ಚಿನ್ನ ಸಹಿತ ಹಲವು ಪ್ರಶಸ್ತಿ……
ಪುತ್ತೂರು: ಇಲ್ಲಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಸುಹಾಸ್.ಪಿ.ಎಂ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಈಜು ಸ್ಪರ್ಧೆಯಲ್ಲಿ 1 ಚಿನ್ನ, 8 ಬೆಳ್ಳಿ ಮತ್ತು 1 ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.
ಬೆಂಗಳೂರಿನ ಎಮ್.ಎಸ್.ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಶ್ರಯದಲ್ಲಿ ಬಸವನಗುಡಿ ಈಜುಕೊಳದಲ್ಲಿ ನಡೆದ ರಾಜ್ಯಮಟ್ಟದ ಈ ಸ್ಪರ್ಧೆಯಲ್ಲಿ ಸುಹಾಸ್.ಪಿ.ಎಂ ಒಟ್ಟು ಹತ್ತು ವಿಭಾಗಗಳಲ್ಲಿ ಸ್ಪರ್ಧಿಸಿದ್ದರು ಇದರಲ್ಲಿ 100ಮೀ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಅದಲ್ಲದೆ 50ಮೀ ಬಟರ್ಫ್ಲೈ, 100ಮೀ ಬಟರ್ಫ್ಲೈ, 200ಮೀ ಬಟರ್ಫ್ಲೈ, 200 ಮೀ ಫ್ರೀಸ್ಟೈಲ್, 400 ಮೀ ಫ್ರೀಸ್ಟೈಲ್, 1500 ಮೀ ಫ್ರೀಸ್ಟೈಲ್, 200ಮೀ ವೈಯಕ್ತಿಕ ಮೆಡ್ಲೇ, 200ಮೀ ಬ್ರೆಸ್ಟ್ ಸ್ಟ್ರೋಕ್ನಲ್ಲಿ ಬೆಳ್ಳಿ ಮತ್ತು 200ಮೀ ಬ್ಯಾಕ್ಸ್ಟ್ರೋಕ್ ವಿಭಾಗದಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇವರು ತಮ್ಮ ಈ ಸಾಧನೆಯೊಂದಿಗೆ ಪಂಜಾಬಿನ ಜಾಲಂಧರ್ ನಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಈಜು ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಸುಹಾಸ್ ಅವರಿಗೆ ಪಾರ್ಥ ವಾರಣಾಸಿ, ನಿರೂಪ್.ಜಿ.ಆರ್, ರೋಹಿತ್ ಮತ್ತು ಯಜ್ಞೇಶ್ ತರಬೇತಿಯನ್ನು ನೀಡಿದ್ದು, ಕಾಲೇಜ್ನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






