ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಲಹಾ ಕೇಂದ್ರ ಉದ್ಘಾಟನೆ…

ಪುತ್ತೂರು:ಇಂದಿನ ಯುವಜನತೆ ಉದ್ಯೋಗವನ್ನು ಅರಸಿ ಪಟ್ಟಣಗಳಿಗೆ ಹೋಗುವ ಬದಲು ಗ್ರಾಮೀಣ ಭಾಗದಲ್ಲಿ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಉದ್ಯೋಗದಾತರಾಗುವತ್ತ ಮನ ಮಾಡಬೇಕು. ಇದರ ಮೂಲಕವಾಗಿ ಪ್ರಧಾನ ಮಂತ್ರಿಯವರ ಮೇಕ್ ಇನ್ ಇಂಡಿಯಾ ಹಾಗೂ ವೋಕಲ್ ಫಾರ್ ಲೋಕಲ್ ಪರಿಕಲ್ಪನೆಯು ಯಶಸ್ವಿಯಾಗುವಂತೆ ಮಾಡಬೇಕು ಎಂದು ಪುತ್ತೂರು ವಿದಾನಸಭಾ ಕ್ಷೇತ್ರದ ಶಾಸಕ ಶ್ರೀ.ಸಂಜೀವ ಮಠಂದೂರು ಹೇಳಿದರು.
ಅವರು ಸಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಇಂಜಿನಿಯರಿಂಗ್‍ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾರಂಭಿಸಲಾದ ಸಿಇಟಿ ಸಲಹಾ ಕೇಂದ್ರವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಮಾನಗಳು, ಗೊಂದಲಗಳು ಇರುವುದು ಸಹಜ ಇದರ ನಿವಾರಣೆಗೆ ಇಂತಹ ಸಲಹಾ ಕೇಂದ್ರಗಳು ಸಹಕಾರಿಯಾಗುತ್ತವೆ. ಇದರ ಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಪಡೆದುಕೊಳ್ಳುವಂತಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸತೀಶ್ ರಾವ್.ಪಿ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇಂತಹ ಸಹಾಯ ಕೇಂದ್ರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಪ್ರತಿವರ್ಷವೂ ಅನೇಕ ಬದಲಾವಣೆಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ಪ್ರಕ್ರಿಯೆಯ ಮೊದಲೇ ವಿದ್ಯಾರ್ಥಿಗಳ ಅನುಮಾನಗಳನ್ನು ಪರಿಹರಿಸುವುದರ ಮೂಲಕವಾಗಿ ವಿದ್ಯಾರ್ಥಿಗಳನ್ನು ತಾಂತ್ರಿಕ ಶಿಕ್ಷಣದತ್ತ ಪ್ರೇರೇಪಿಸುವ ಕೆಲಸವನ್ನು ಇಲ್ಲಿ ಮಾಡಲಾಗುತ್ತದೆ ಎಂದರು. ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಸೇರುವುದಕ್ಕೆ ಬೇಕಾದ ಮಾರ್ಗದರ್ಶನ, ಹೊಂದಿಸಬೇಕಾದ ದಾಖಲೆಗಳು, ಸರ್ಕಾರದಿಂದ ಸಿಗುವ ವಿವಿಧ ವಿದ್ಯಾರ್ಥಿವೇತನಗಳು ಮುಂತಾದ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ ಹಾಗೂ ಸಿಇಟಿ ಪ್ರಕ್ರಿಯೆ ಮುಗಿಯುವವರೆಗೂ ನಿರಂತರವಾಗಿ ಸಹಾಯ ಕೇಂದ್ರವು ಕೆಲಸ ಮಾಡುತ್ತದೆ ಎಂದರು.
ಕಾಲೇಜಿನ ಸಂಚಾಲಕ ರಾಧಾಕೃಷ್ಣ ಭಕ್ತ, ನಿರ್ದೇಶಕರಾದ .ಸುಬ್ರಮಣ್ಯ ಭಟ್.ಟಿ.ಎಸ್, ರವಿಕೃಷ್ಣ.ಡಿ.ಕಲ್ಲಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಸ್ವಾಗತಿಸಿ, ಪ್ರಾಸ್ತಾವನೆಗೈದರು. ಮೂಲವಿಜ್ಞಾನ ವಿಭಾಗದ ಡಾ.ಪ್ರಸಾದ್.ಎನ್.ಬಾಪಟ್ ವಂದಿಸಿದರು. ಹಿರಿಯ ಪ್ರಯೋಗಾಲಯ ಬೋಧಕ ಹರಿಪ್ರಸಾದ್.ದೈಲಾ ಕಾರ್ಯಕ್ರಮ ನಿರ್ವಹಿಸಿದರು.

 

 

 

 

 

Sponsors

Related Articles

Leave a Reply

Your email address will not be published. Required fields are marked *

Back to top button