ಬಾಳಿಲ ಪ್ರೌಢಶಾಲಾ ಶಿಕ್ಷಕ ದಿನೇಶ್ಚಂದ್ರ ಕಿಲಂಗೋಡಿ ನಿಧನ…

ಸುಳ್ಯ: ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಶಿಕ್ಷಕರಾಗಿ ಸುದೀರ್ಘ ಸೇವೆ ಸಲ್ಲಿಸುತ್ತಿದ್ದ ದಿನೇಶ್ಚಂದ್ರ ಕಿಲಂಗೋಡಿ ಇಂದು ಬೆಳಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಇವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಬಾಳಿಲ ಪ್ರೌಢಶಾಲೆಯ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದ ದಿನೇಶ್ಚಂದ್ರ ಕಿಲಂಗೋಡಿ ಅವರು ವಿದ್ಯಾಬೋಧಿನೀ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.