ಕಡಬ ತಾ.ಪಂ ಪ್ರಪ್ರಥಮ ಚುನಾವಣೆ – ಬಿಜೆಪಿ ತೆಕ್ಕೆಗೆ ಆಡಳಿತ….
ಕಡಬ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕಿಗೆ ಪ್ರಪ್ರಥಮವಾಗಿ ತಾ.ಪಂ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ
ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷರಾಗಿ ಜಯಂತಿ ಆರ್.ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಯಾವುದೇ ರಾಜಕೀಯ ಸ್ಥಿತ್ಯಂತರ ನಡೆಯದೆ ಉಪಾಧ್ಯಕ್ಷ ಸ್ಥಾನವೂ ಬಿಜೆಪಿಗೆ ಒಳಿದಿದೆ.
ಪುತ್ತೂರು ಹಾಗೂ ಸುಳ್ಯ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಡಬ ತಾಲೂಕಿಗೆ ಸೇರ್ಪಡೆಯಾಗಿರುವ ಒಟ್ಟು 42 ಗ್ರಾಮಗಳನ್ನೊಳಗೊಂಡ 13 ತಾ.ಪಂ. ಕ್ಷೇತ್ರಗಳನ್ನು ಸೇರಿಸಿ ಹೊಸ ಕಡಬ ತಾಲೂಕು ಪಂಚಾಯಿತಿ ಅಸ್ತಿತ್ವಕ್ಕೆ ಬಂದಿತ್ತು.