ಸುಳ್ಯದ ವಕೀಲ ಸಾವು…

ಮಂಗಳೂರು: ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನ್ಯಾಯವಾದಿ ಬಿ.ಎಂ. ದುಗ್ಗಪ್ಪ ಅವರು ಶುಕ್ರವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಸುಳ್ಯ ಮೂಲದ ಅವರು, ಬುಧವಾರ ಸಂಜೆ ತನ್ನ ಕಚೇರಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿತ್ತು. ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.