ಪುಲ್ವಾಮದಲ್ಲಿ ಮೂವರು ಉಗ್ರರು ಎನ್ ಕೌಂಟರ್, ಓರ್ವ ಯೋಧ ಹುತಾತ್ಮ …

ಪುಲ್ವಾಮ: ಜಮ್ಮು-ಕಾಶ್ಮೀರ ಪೊಲೀಸ್, ಭಾರತೀಯ ಸೇನೆ, ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆಯ ಪರಿಣಾಮವಾಗಿ ಪುಲ್ವಾಮದಲ್ಲಿನ ಝಡೂರ ಪ್ರದೇಶದಲ್ಲಿ ಮೂವರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ.

ಈ ಘಟನೆಯಲ್ಲಿ ಗಾಯಗೊಂಡಿದ್ದ ಓರ್ವ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಎನ್ ಕೌಂಟರ್ ನಡೆದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾತ್ರಿ 1 ಗಂಟೆಗೆ ಈ ಗುಂಡಿನ ಚಕಮಕಿ ಪ್ರಾರಂಭವಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೂ ಮುನ್ನ ಆ.28 ರಂದು ನಾಲ್ವರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿತ್ತು. ಈ ಎನ್ ಕೌಂಟರ್ ಮೂಲಕ ಜಮ್ಮು-ಕಾಶ್ಮೀರದಲ್ಲಿ 24 ಗಂಟೆಗಳಲ್ಲಿ 7 ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ವರ್ಷ ಹತರಾಗಿರುವ ಭಯೋತ್ಪಾದಕರ ಸಂಖ್ಯೆ 153 ಕ್ಕೆ ಏರಿಕೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button