ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್​ಕುಮಾರ್​ ಕಟೀಲ್​ಗೆ ಕೊರೊನ ಸೋಂಕು ದೃಢ…

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳೀನ್​ಕುಮಾರ್​ ಕಟೀಲ್​ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ.

ನಾನು ಕೋವಿಡ್​19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ನಳೀನ್​ಕುಮಾರ್​ ಟ್ವೀಟ್​ ಮಾಡಿದ್ದಾರೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡಿದ್ದಾರೆ.

 

Sponsors

Related Articles

Leave a Reply

Your email address will not be published. Required fields are marked *

Back to top button