ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಾಳೆಯಿಂದ ಸೇವೆ ಆರಂಭ …

ಉಡುಪಿ : ಸೆ. 1 ರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭಿಸಬಹುದು. ಆದರೆ ಅನ್ನ ದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಸೇವೆ ಆರಂಭಿಸಲು ಅನುಮತಿ ಕೋರಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದೇವೆ. ಒಳಾಂಗಣದ ಎಲ್ಲಾ ಸೇವೆ ಆರಂಭ ಮಾಡಿ ಎಂದು ಮನವಿ ಮಾಡಿದ್ದೇವೆ. ಸೆಪ್ಟೆಂಬರ್ 1ರಿಂದ ಸೇವೆ ಆರಂಭ ಮಾಡಬೇಕು ಎಂಬುದು ನಮ್ಮ ಗುರಿಯಾಗಿದೆ. ಸರ್ಕಾರದಿಂದ ಅಧಿಕೃತ ಮಾಹಿತಿ ಮತ್ತು ಅನುಮತಿ ಎರಡು ದಿನದಲ್ಲಿ ಬರಬಹುದು ಎಂದು ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button