ಬುಧವಾರ – ದ.ಕ 414 , ಉಡುಪಿ 167 ಹಾಗೂ ರಾಜ್ಯದಲ್ಲಿ 9860 ಕೊರೊನ ಪಾಸಿಟಿವ್ ಪತ್ತೆ…
ಮಂಗಳೂರು: ಇಂದು (ಬುಧವಾರ) ದ.ಕ ಜಿಲ್ಲೆಯಲ್ಲಿ 414 , ಉಡುಪಿ 167 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 414 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13474 ಕ್ಕೆ ಏರಿಕೆಯಾಗಿದೆ.ಇಂದು 6 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 381 ಕ್ಕೆ ಏರಿಕೆಯಾಗಿದೆ. ಇಂದು 346 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2600 ಸಕ್ರಿಯ ಪ್ರಕರಣಗಳಿವೆ. 414 ಪ್ರಕರಣಗಳ ಪೈಕಿ 222 ಪ್ರಕರಣಗಳು ಮಂಗಳೂರಿನಿಂದ, 64 ಪ್ರಕರಣಗಳು ಬಂಟ್ವಾಳದಿಂದ, 49 ಪ್ರಕರಣಗಳು ಪುತ್ತೂರಿನಿಂದ, 31 ಪ್ರಕರಣಗಳು ಸುಳ್ಯದಿಂದ , 28 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 20 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು 167 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11924ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2221 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಇಂದು 9860 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,61341ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 113 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5950ಕ್ಕೆ ಏರಿಕೆಯಾಗಿದೆ.ಇಂದು 6287 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 2,60,913ಕ್ಕೆ ಏರಿಕೆಯಾಗಿದೆ. 94, 459 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 751 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.