ಸುಳ್ಯ – ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಗುರುತಿನ ಚೀಟಿ, ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ…

ಸುಳ್ಯ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಗುರುತಿನ ಚೀಟಿ, ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸೆ.2 ರಂದು ನಡೆಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹಾಗು ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಗುರುತಿನ ಚೀಟಿ, ಆರೋಗ್ಯ ಕಾರ್ಡ್ ಹಾಗು ಕಿಟ್ ಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಶ್ರೀನಿವಾಸ ನಾಯಕ್ ಇಂದಾಜೆ ಸಂಘದ ಕಾರ್ಯಚಟುವಟಿಕೆಗಳ ಮತ್ತು ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ವಿವರಿಸಿದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದ ಯಶಸ್ವಿನ ಸವಿ ನೆನಪಿಗಾಗಿ ಸಂಘದ ಸದಸ್ಯರಿಗೆ ಕಿಟ್ ಗಳನ್ನು ವಿತರಿಸಲಾಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಲೋಕೇಶ್ ಪೆರ್ಲಂಪಾಡಿ ವಂದಿಸಿದರು.