ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಗೆ ಹುಟ್ಟೂರಲ್ಲಿ ಸನ್ಮಾನ..

ಪುತ್ತೂರು: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ‌ ಸರ್ಕಾರವಿದ್ದು, ಇದನ್ನು ಅರ್ಥ ಮಾಡಿಕೊಂಡ ಪಕ್ಷದ ಕಾರ್ಯಕರ್ತರು ವಿರೋಧ ಪಕ್ಷದ ಮನಸ್ಥಿತಿ ಯಿಂದ ಹೊರಬಂದು ಆಡಳಿತ ಪಕ್ಷದ ಕಾರ್ಯಕರ್ತರಂತೆ ವರ್ತಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಹೇಳಿದರು.

ಅವರು ಶುಕ್ರವಾರ ತನ್ನ ಹುಟ್ಟೂರಾದ ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.ರಾಜ್ಯದಲ್ಲಿ ಪಕ್ಷದ ಹಿರಿಯರ ದಂಡೇ ಇದೆ. ಕೋಟಿ ಕೋಟಿ ಕಾರ್ಯಕರ್ತರಿದ್ದಾರೆ. ಎಲ್ಲರ ಸಹಕಾರದಿಂದ ಜವಾಬ್ದಾರಿಗೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುವುದಾಗಿಯೂ ಅವರು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಟಂದೂರು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಹರಿಕೃಷ್ಣ ಬಂಟ್ವಾಳ್, ಕಿಶೋರ್ ಕುಮಾರ್, ಮಲ್ಲಿಕಾ ಪ್ರಸಾದ್, ಕ್ಯಾ.ಗಣೇಶ್ ಕಾರ್ಣಿಕ್, ಗೋಪಾಲಕೃಷ್ಣ ಹೇರಳೆ, ಚನಿಲ ತಿಮ್ಮಪ್ಪ ಶೆಟ್ಟಿ, ರಾಧಾಕೃಷ್ಣ ಬೋರ್ಕರ್, ಜೀವಂಧರ ಜೈನ್ ಉಪಸ್ಥಿತರಿದ್ದರು.30ptr Nalin Sabhe 300x106

Related Articles

Leave a Reply

Your email address will not be published. Required fields are marked *