‘ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್’ ಪ್ರಶಸ್ತಿ ಪ್ರದಾನ ಸಮಾರಂಭ- ಪ್ರತಿಭಾ ಪುರಸ್ಕಾರ…
ಸುಳ್ಯ : ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ)ಇದರ ವತಿಯಿಂದ ದಿ।ತೆಕ್ಕಿಲ್ ಮಹಮ್ಮದ್ ಹಾಜಿಯವರ ಸ್ಮರಣಾರ್ಥ ಪ್ರತಿವರ್ಷ ನೀಡುತ್ತಿರುವ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ನ್ನು ಕೇರಳ ಮಾಧ್ಯಮಂ ಪತ್ರಿಕೆಯ ಮುಖ್ಯ ವರದಿಗಾರ ಹಾಗೂ ಯುನಿಸೆಫ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ರವೀಂದ್ರನ್ ರಾವನೇಶ್ವರನ್ ರವರಿಗೆ ಇಂದು( ಸೆ.12) ಪ್ರದಾನ ಮಾಡಲಾಯಿತು.
ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ಈ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ನ್ನು ಪ್ರದಾನ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಟಿ.ಎಮ್.ಶಹೀದ್ ತೆಕ್ಕಿಲ್ ವಹಿಸಿದ್ದರು. ಈ ಸಂದರ್ಭದಲ್ಲಿ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಮತ್ತು ದ್ವಿತೀಯ ಅಂಕ ಗಳಿಸಿದ ತಾಲ್ಲೂಕಿನ ವಿದ್ಯಾರ್ಥಿಗಳನ್ನು ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಗಳಿಸಿದ ಅನೂಷ್ ಎ.ಎಲ್, ಗೌರಿಪ್ರಿಯ, ಮರಿಯಮತ್ ರಫಾನ, ಮೇಘಶ್ರೀ, ಮುಬೀನ, ಪವನ್ ಯು.ಆರ್, ಶಮ್ಮಾಸ್ ಟಿ.ಜೆ ಸೇರಿದಂತೆ ಗರಿಷ್ಠ ಅಂಕ ಗಳಿಸಿದ ತೆಕ್ಕಿಲ್ ಶಾಲಾ ವಿದ್ಯಾರ್ಥಿಗಳನ್ನು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎಮ್ ನಾರಾಯಣ ಸ್ವಾಮಿ ಸನ್ಮಾನಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ರಾದ ಹರೀಶ್ ಕುಮಾರ್, ಬಲರಾಜ್ , ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್.ಗಂಗಾಧರ್ , ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ, ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ವಾಸುದೇವ ಕಟ್ಟೆಮನೆ, ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಗೂನಡ್ಕ ತೆಕ್ಕಿಲ್ ಮಾದರಿ ಶಾಲೆ ಮುಖ್ಯೋಪಾಧ್ಯಾಯ ದಾಮೋದರ , ಪಠೇಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬದ್ರುದ್ದೀನ್ ಪಠೇಲ್, ತೆಕ್ಕಿಲ್ ಪ್ರತಿಷ್ಠಾನ ಕೊಶಾಧಿಕಾರಿ ಟಿ.ಎಮ್.ಜಾವೇದ್, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಟಿ.ಎಮ್.ಶಾಝ್ ತೆಕ್ಕಿಲ್ ಮುಂತಾದವರು ಉಪಸ್ಥಿತರಿದ್ದರು.
ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಟಿ.ಎಮ್.ಶಹೀದ್ ಸ್ವಾಗತಿಸಿ, ಕೆ.ಎಮ್ .ಮುಸ್ತಫಾ ಕಾರ್ಯಕ್ರಮ ನಿರೂಪಣೆಗೈದರು.
ವರದಿ : ತಾಜುದ್ದೀನ್ ಎಸ್ ಅರಂತೋಡು