ಶನಿವಾರ – ದ.ಕ 401 , ಉಡುಪಿ 169 ಹಾಗೂ ರಾಜ್ಯದಲ್ಲಿ 9140 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಶನಿವಾರ ) ದ.ಕ ಜಿಲ್ಲೆಯಲ್ಲಿ 401 , ಉಡುಪಿ 169 ಹಾಗೂ ರಾಜ್ಯದಲ್ಲಿ 9140 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 401 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16959 ಕ್ಕೆ ಏರಿಕೆಯಾಗಿದೆ. ಇಂದು 5 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 439 ಮಂದಿ ಬಲಿಯಾಗಿದ್ದಾರೆ.ಇಂದು 204 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 3707 ಸಕ್ರಿಯ ಪ್ರಕರಣಗಳಿವೆ. 401 ಪ್ರಕರಣಗಳ ಪೈಕಿ 227 ಪ್ರಕರಣಗಳು ಮಂಗಳೂರಿನಿಂದ, 47 ಪ್ರಕರಣಗಳು ಬಂಟ್ವಾಳದಿಂದ, 52 ಪ್ರಕರಣಗಳು ಪುತ್ತೂರಿನಿಂದ, 30 ಪ್ರಕರಣಗಳು ಸುಳ್ಯದಿಂದ , 24 ಪ್ರಕರಣಗಳು ಬೆಳ್ತಂಗಡಿಯಿಂದ ಹಾಗೂ 21 ಪ್ರಕರಣಗಳು ಬೇರೆ ಜಿಲ್ಲೆಯವರದ್ದಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 169 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 13912ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1760 ಸಕ್ರಿಯ ಪ್ರಕರಣಗಳಿವೆ.

ಇನ್ನು ರಾಜ್ಯದಲ್ಲಿ ಇಂದು 9140 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,49,551ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇಂದು 94 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,161ಕ್ಕೆ ಏರಿಕೆಯಾಗಿದೆ.ಇಂದು 9,557 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,44,556ಕ್ಕೆ ಏರಿಕೆಯಾಗಿದೆ. 97,815 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 795 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು 150 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

Sponsors

Related Articles

Leave a Reply

Your email address will not be published. Required fields are marked *

Back to top button