ಮಂಗಳವಾರ – ದ.ಕ 316 ಹಾಗೂ ರಾಜ್ಯದಲ್ಲಿ 7576 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಮಂಗಳವಾರ ) ದ.ಕ ಜಿಲ್ಲೆಯಲ್ಲಿ 316 ಹಾಗೂ ರಾಜ್ಯದಲ್ಲಿ 7576 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 316 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18092 ಕ್ಕೆ ಏರಿಕೆಯಾಗಿದೆ. ಇಂದು 5 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 452 ಮಂದಿ ಬಲಿಯಾಗಿದ್ದಾರೆ.ಇಂದು 322 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 4034 ಸಕ್ರಿಯ ಪ್ರಕರಣಗಳಿವೆ.
ಇನ್ನು ರಾಜ್ಯದಲ್ಲಿ ಇಂದು 7576 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,75,265ಕ್ಕೇರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 97 ಮಂದಿ ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,481ಕ್ಕೆ ಏರಿಕೆಯಾಗಿದೆ. ಇಂದು 7,406 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,69,299ಕ್ಕೆ ಏರಿಕೆಯಾಗಿದೆ. 98,536 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ಇಂದು 172 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.