ಬುಧವಾರ – ರಾಜ್ಯದಲ್ಲಿ 9725 ಕೊರೋನಾ ಸೋಂಕು ಪತ್ತೆ….
ಬೆಂಗಳೂರು: ಇಂದು (ಬುಧವಾರ) ರಾಜ್ಯದಲ್ಲಿ 9725 ಕೊರೋನಾ ಸೋಂಕು ಪತ್ತೆಯಾಗಿದೆ.
ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿ 9,725 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,84,990ಕ್ಕೇರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 70 ಮಂದಿ ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,536ಕ್ಕೆ ಏರಿಕೆಯಾಗಿದೆ.ಇಂದು 6,583 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,75,809ಕ್ಕೆ ಏರಿಕೆಯಾಗಿದೆ. 1,01,626 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.