ಆಧಾರ್ ಕಾರ್ಡ್ ಅವ್ಯವಸ್ಥೆ – ಸೂಕ್ತ ಕ್ರಮಕ್ಕೆ ರಮಾನಾಥ ರೈ ಒತ್ತಾಯ…
ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಆಧಾರ್ ಕಾರ್ಡ್ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ದಿಢೀರ್ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಬೇಬಿ ಕುಂದರ್,ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ತಿಲಕ್ ಪೂಜಾರಿ ಉಪಸ್ಥಿತರಿದ್ದರು.