ಸೆ.26 – ಅರಂತೋಡಿನಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ…

ಸುಳ್ಯ :ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗ ದ.ಕ,ಜಿಲ್ಲೆ, ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಸ್ಟರ್, ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ, (ರಿ) ಪಠೇಲ್ ಚಾರಿಟೇಬಲ್ ಟ್ರಸ್ಟ್ (ರಿ), ಪಠೇಲ್ ಮೆಡಿಕಲ್ & ಲ್ಯಾಬೋರೇಟರಿ ಸುಳ್ಯ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು , ಕೆ.ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್‌ ಸಾರ್ವಜನಿಕ ರಕ್ತದಾನ ಶಿಬಿರ ,ರಕ್ತ ವರ್ಗೀಕರಣ ಶಿಬಿರ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಕಾರ್ಯಕ್ರಮ ಸೆ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಅಲ್ಹಾಜ್ ಇಸ್ಹಾಕ್ ಬಾಖವಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಸ್ಟರ್ ಅಧ್ಯಕ್ಷ ಅಬ್ದುಲ್ ರಝಾಕ್ ಕರಾವಳಿ ವಹಿಸಲಿದ್ದಾರೆ. ಸಮಾರಂಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾಧ್ಯಕ್ಷ ಸಯ್ಯದ್ ಅಮೀರ್ ತಂಙಳ್,ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಸಯ್ಯದ್ ಇಸ್ಮಾಯಿಲ್ ತಂಙಳ್, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷ ಟಿ.ಎಮ್.ಶಹೀದ್, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ,ಎಂ.ಬಿ.ಪೌಂಡೇಶನ್ ಅಧ್ಯಕ್ಷ ಎಂ.ಬಿ.ಸದಾಶಿವ , ಎಸ್‌ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಅಧ್ಯಕ್ಷ ಕೆ.ಎಸ್.ಜಮಾಲುದ್ದೀನ್ ಬೆಳ್ಳಾರೆ,ದ.ಕ.ಎಸ್ ಕೆ ಎಸ್ ಎಸ್ ಎಫ್ ವಿಖಾಯ ಉಸ್ತುವಾರಿ ಇಸಾಖ್ ಹಾಜಿ ತೋಡಾರ್,ಕೆ.ವಿ.ಜಿ ಮೆಡಿಕಲ್ ಕಾಲೇಜ್ ವೈದ್ಯರಾದ ಡಾಹರ್ಷವರ್ಧನ್ ,ಅರಂತೋಡು ಗ್ರಾಮ ಪಂಚಾಯಿತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ,ಅರಂತೋಡು ಜಮಾಅತ್ ಅಧ್ಯಕ್ಷರಾದ ಅಶ್ರಫ್ ಗುಂಡಿ,ಪಠೇಲ್ ಮೆಡಿಕಲ್ ಮಾಲಕರಾದ ಬದ್ರುದ್ದೀನ್ ಪಠೇಲ್,ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರಾದ ಉನೈಸ್ ಪೆರಾಜೆ,ದ.ಕ.ವಿಖಾಯ ರಕ್ತದಾನಿ ಉಸ್ತುವಾರಿ ತಾಜುದ್ದೀನ್ ಟರ್ಲಿ,ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಶರೀಫ್ ಅಜ್ವಾವರ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್ ಸೇರಿದಂತೆ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ವಿಖಾಯ ಕ್ಲಸ್ಟರ್ ಕನ್ವೀನರ್ ತಾಜುದ್ದೀನ್ ಅರಂತೋಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Related Articles

Leave a Reply

Your email address will not be published. Required fields are marked *

Back to top button