ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಿಯಾಜ್ ಕಟ್ಟೆಕಾರ್ ಸಂತಾಪ…

ಸುಳ್ಯ : ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ನಗರ ಪಂಚಾಯತ್ ಸದಸ್ಯ ರಿಯಾಜ್ ಕಟ್ಟೆಕಾರ್ ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿ ಇದೇ ಮೊದಲ ಬಾರಿಗೆ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸರಳ ಸಜ್ಜನಿಕೆಯ ರಾಜಕಾರಣಿ ಸುರೇಶ್ ಚನ್ನಬಸಪ್ಪ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ಆಘಾತ ಹಾಗೂ ಅತೀವ ದುಃಖವಾಗಿದೆ. ಪಕ್ಷಾತೀತವಾಗಿ ಎಲ್ಲರೊಂದಿಗೆ ಆತ್ಮೀಯರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದ ದೇಶ, ರಾಜ್ಯ ಅದರಲ್ಲೂ ಉತ್ತರ ಕರ್ನಾಟಕ ಭಾಗ ಒಬ್ಬ ಉತ್ತಮ ನಾಯಕನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಅಗಲಿಕೆಯ ನೋವು ತಾಳಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಿಯಾಜ್ ಕಟ್ಟೆಕಾರ್ ಪ್ರತಿಕ್ರಿಯೆ ನೀಡಿದ್ದಾರೆ.

IMG 20200513 WA0008 E1600921828210 270x300

ರಿಯಾಜ್ ಕಟ್ಟೆಕಾರ್

Related Articles

Leave a Reply

Your email address will not be published. Required fields are marked *