ಖ್ಯಾತ ಪತ್ರಕರ್ತ ರವಿ ಬೆಳೆಗೆರೆ ಇನ್ನಿಲ್ಲ…

ಬೆಂಗಳೂರು: ಖ್ಯಾತ ಬರಹಗಾರ, ಪತ್ರಕರ್ತ ರವಿ ಬೆಳೆಗೆರೆ (62) ನ.12 ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹಾಯ್ ಬೆಂಗಳೂರು ಪತ್ರಿಕೆಯ ಸ್ಥಾಪಕ ಹಾಗೂ ಸಂಪಾದಕರಾದ ರವಿ ಬೆಳೆಗೆರೆ ಅವರು ಪ್ರಾರ್ಥನಾ ಎಂಬ ವಿದ್ಯಾ ಸಂಸ್ಥೆಯನ್ನೂ ಮುನ್ನಡೆಸುತ್ತಿದ್ದರು.
1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿ, ನಂತರ ಪತ್ರಿಕೋದ್ಯಮ ಕ್ಷೇತ್ರಕ್ಕೆ ಪ್ರವೇಶಿಸಿದ್ದರು. ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು ನಂತರ 1995 ರಲ್ಲಿ ಹಾಯ್ ಬೆಂಗಳೂರು ಎಂಬ ವಾರ ಪತ್ರಿಕೆಯನ್ನು ಸ್ಥಾಪಿಸಿ, ಯಶಸ್ವಿಯಾಗಿ ಮುನ್ನಡೆಸುತ್ತಿದ್ದರು.
ಪತ್ರಿಕೋದ್ಯಮದಲ್ಲಿ ಕ್ಷೇತ್ರದಲ್ಲಿ ರವಿ ಬೆಳೆಗೆರೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ದೊರೆತಿವೆ.

Sponsors

Related Articles

Leave a Reply

Your email address will not be published. Required fields are marked *

Back to top button