ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರ…

ಚೆನ್ನೈ:ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿತಿ ತೀವ್ರ ವಿಷಮ ಸ್ಥಿತಿಗೆ ತಲುಪಿದೆ ಎಂದು ಎಂಜಿಎಂ ಆಸ್ಪತ್ರೆ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ಆಗಸ್ಟ್ 5ರಂದು ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಪಿ ಬಾಲಸುಬ್ರಮಣ್ಯಂ ಅವರು ಈಗಲೂ ವೆಂಟಿಲೇಟರ್ ನಲ್ಲಿದ್ದಾರೆ ಎಂದು ತಿಳಿದುಬಂದಿದೆ.