ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಮುಷ್ಕರ- ಕೊರೋನಾ ವರದಿ ಇಲ್ಲ…

ಮಂಗಳೂರು: ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿರುವ ಆರೋಗ್ಯ ಇಲಾಖೆಯ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರ ಗುತ್ತಿಗೆ ನೌಕರರು, ವೈದ್ಯಕೀಯ, ಅರೆವೈದ್ಯಕೀಯ, ಕಚೇರಿ ಸಿಬ್ಬಂದಿಗಳ ಮುಷ್ಕರ ನಡೆಸುತ್ತಿದ್ದು, ಸರಕಾರಕ್ಕೆ ಕೋವಿಡ್ ವರದಿ ಸಲ್ಲಿಸದಿರಲು ನಿರ್ಧರಿಸಲಾಗಿದೆ.
ಸೆ. 24ರಿಂದ ಬೇಡಿಕೆ ಈಡೇರುವ ತನಕ ಮುಷ್ಕರ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಹಲವಾರು ವರ್ಷಗಳಿಂದ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ವಹಿಸದೆ ಇರುವುದರಿಂದ ಅನಿವಾರ್ಯವಾಗಿ ಮುಷ್ಕರದ ನಿರ್ಣಯ ಕೈಗೊಂಡಿದ್ದಾರೆ ಎನ್ನಲಾಗಿದೆ.