ಸುದ್ದಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಎಲ್ಲಾ 32 ಮಂದಿ ಆರೋಪಿಗಳು ನಿರ್ದೋಷಿಗಳು…

ಲಖನೌ: 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ.
ಮಸೀದಿ ಧ್ವಂಸ ಪ್ರಕರಣ ಕೇಸಿನಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ ಸೇರಿದಂತೆ ಎಲ್ಲಾ 32 ಮಂದಿ ಆರೋಪಿಗಳಿಗೆ ಲಖನೌ ವಿಶೇಷ ಸಿಬಿಐ ನ್ಯಾಯಾಲಯ ಕ್ಲೀನ್ ಚಿಟ್ ಸಿಕ್ಕಿದೆ. ಈ ಮೂಲಕ 28 ವರ್ಷಗಳ ದೀರ್ಘ ಕಾಲದ ಕಾನೂನು ಹೋರಾಟಕ್ಕೆ ಇಂದು ತಾತ್ವಿಕ ಅಂತ್ಯ ಸಿಕ್ಕಿದೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಒಂದು ಆಕಸ್ಮಿಕ ಘಟನೆ, ಮಸೀದಿ ಧ್ವಂಸ ಒಂದು ಪೂರ್ವ ನಿಯೋಜಿತ ಕೃತ್ಯವಲ್ಲ, ಉದ್ದೇಶಪೂರ್ವಕವಾಗಿ ಮಸೀದಿಯನ್ನು ಧ್ವಂಸ ಮಾಡಲಾಗಿದೆ ಎಂದು ಹೇಳಲು ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷಿಗಳಿಲ್ಲ ಎಂದು ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಎಸ್ ಕೆ ಯಾದವ್ ತೀರ್ಪು ಪ್ರಕಟಿಸಿದ್ದಾರೆ.
ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಕೇಂದ್ರದ ಸಚಿವರು ಎಲ್ ಕೆ ಅಡ್ವಾಣಿ ನಿವಾಸಕ್ಕೆ ತೆರಳಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Advertisement

Related Articles

Leave a Reply

Your email address will not be published. Required fields are marked *

Back to top button