ಪೋಷಣ್ ಅಭಿಯಾನ ಮಾಸಾಚರಣೆ 2020 ಸಮಾರೋಪ ಸಮಾರಂಭ…

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಬಂಟ್ವಾಳ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪೋಷಣ್ ಅಭಿಯಾನ ಮಾಸಾಚರಣೆ 2020 ಸಮಾರೋಪ ಸಮಾರಂಭ ಹಾಗೂ ಪೋಷಣ್ ಅಭಿಯಾನ ಮಾಸಾಚರಣೆಯ ಪುನರಾವಲೋಕನ ಕಾರ್ಯಕ್ರಮ ಬಿ.ಸಿ.ರೋಡಿನ ಸ್ತ್ರೀಶಕ್ತಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ಸಿ.ಡಿ.ಪಿ.ಒ.ಇಲಾಖೆಯಡಿಯಲ್ಲಿ ಬರುವ ಪ್ರತಿಯೊಂದು ಕಾರ್ಯಕ್ರಮಗಳು ಮಹಿಳೆಯರ ಸರ್ವತೋಮುಖ ಪ್ರಗತಿಗೆ ಪೂರಕವಾಗಿದ್ದು, ಪ್ರತಿಯೊಬ್ಬ ಮಹಿಳೆಯೂ ಇದರ ಪ್ರಯೋಜನ ಪಡೆಯಬೇಕು ಎಂದರು.
ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ, ಕೆಲಸದ ಒತ್ತಡದ ಮಧ್ಯೆ ಪ್ರತಿಯೊಬ್ಬರೂ ಆರೋಗ್ಯದ ಕಡೆಗೆ ಗಮನಹರಿಸಬೇಕಾಗಿದೆ. ಆರೋಗ್ಯ ಇಲ್ಲದೆ ಇದ್ದರೆ ನಾವು ಏನನ್ನು ಸಾಧಿಸಲು ಸಾಧ್ಯವಿಲ್ಲ. ಆರೋಗ್ಯದ ಬಗ್ಗೆ ಹೆಚ್ಚು ಗಮನ ಸೆಳೆಯುವ ಉದ್ದೇಶದಿಂದ ಇಲಾಖೆ ಇಂತಹ ಕಾರ್ಯಕ್ರಮವನ್ನು ಕೈಗೊಂಡಿದೆ. ಮಹಿಳೆಯರು ಇದರ ಪ್ರಯೋಜನ ಪಡೆಯಬೇಕಾಗಿದೆ ಎಂದರು.
ಕೌಟುಂಬಿಕ ದೌರ್ಜನ್ಯ ತಡೆ ವಿಭಾಗ ಆಪ್ತ ಸಮಾಲೋಚಕಿ ಆಶಾಮಣಿ ರೈ , ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಬಂಟ್ವಾಳ ಸಿ.ಡಿ.ಪಿ.ಒ ಗಾಯತ್ರಿ ಕಂಬಳಿ ಕಾರ್ಯಕ್ರಮದ ಪ್ರಸ್ತಾವನೆ ಮಾಡಿದರು. ಹಿರಿಯ ಮೇಲ್ವಿಚಾರಕಿ ಬಿ. ಭಾರತಿ ಸ್ವಾಗತಿಸಿ, ಹಿರಿಯ ಮೇಲ್ವಿಚಾರಕಿ ಶಾಲಿನಿ ವಂದಿಸಿದರು. ಮೇಲ್ವಿಚಾರಕಿ ಸಿಂದು ಕೆ.ಬಿ. ಕಾರ್ಯಕ್ರಮ ನಿರೂಪಿಸಿದರು.
ಮೇಲ್ವಿಚಾರಕಿಯರಾದ ಸರೋಜ ಭಟ್ , ಸವಿತ ನವೀನ್, ನೀತಕುಮಾರಿ, ಸುಜಾತ , ತಾರದುರಗಪ್ಪ ಮಲ್ಲಜ್ಜಿಮಣಿ, ಯಶೋಧ ಪಿ. ಲೀಲಾವತಿ, ಶೋಭ ಎಮ್ , ಪ್ರಥಮ ದರ್ಜೆ ಸಹಾಯಕ ವಸಂತ ಕೆ ಹಾಜರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button